ಕರಾವಳಿ

ವಿಶ್ವಹಿಂದೂ ಪರಿಷದ್ ಕಾರ್ಯಾಲಯದ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲಗೆ ವಿರೋಧ, ಮಾತಿನ ಚಕಮಕಿ





ಪುತ್ತೂರು: ವಿಶ್ವಹಿಂದೂ ಪರಿಷದ್ ನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆಗೆ ಆಗಮಿಸಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕೆಲ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ತನ್ನ ಬೆಂಬಲಿಗರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಕಾರಿನಿಂದ ಇಳಿಯುತ್ತಿದ್ದಂತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕೆಲವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಇದೇ ವೇಳೆ ಪುತ್ತಿಲ ಬೆಂಬಲಿಗರ ಮತ್ತು ಪುತ್ತಿಲ ಆಗಮನವನ್ನು ವಿರೋಧಿಸಿದ ಕಾರ್ಯಕರ್ತರ ನಡುವೆ ಮಾತಿನ ಚಕಾಮಕಿ ನಡೆದಿದೆ ಎನ್ನಲಾಗಿದೆ. ವಿರೋಧದ ನಡುವೆಯೂ ಪುತ್ತಿಲ ಅವರು ಕೆಲ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

error: Content is protected !!