ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯಭೇರಿ
ಪುತ್ತೂರು: ದ.ಕ, ಉಡುಪಿ ಜಿಲ್ಲಾ ವಿಧಾನ ಪರಿಷತ್ತಿನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನ ರಾಜು ಪೂಜಾರಿ ವಿರುದ್ದ 1693 ಮತಗಳ ಅಂತರದಿಂದ ಕಿಶೋರ್ ಕುಮಾರ್ ಗೆಲುವಿನ ನಗೆ ಬೀರಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಗಳಿಸಿದ್ದಾರೆ.
ಅಕ್ಟೋಬರ್ 21ರಂದು ಮತದಾನ ನಡೆದಿದ್ದು ಇಂದು (ಅ.24ರಂದು) ಮತ ಎಣಿಕೆ ನಡೆಯಿತು. ಕಿಶೋರ್ ಕುಮಾರ್ ಅವರು ಸರ್ವೆ ಗ್ರಾಮದ ಬೊಟ್ಯಾಡಿ ನಿವಾಸಿ.