ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆ.ಡಿ.ಎಸ್ ಮೈತ್ರಿ ಅಭ್ಯರ್ಥಿ ಘೋಷಣೆ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ.
ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿದೆ. ಬಿಎಸ್ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು.