ಪ್ರೌಢಶಾಲಾ ಕ್ರೀಡಾ ಕೂಟ: ಸಾಲ್ಮರ ಮೌಂಟನ್ ವ್ಯೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವೈಯಕ್ತಿಕ ಚಾಂಪಿಯನ್
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು,ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪ್ಪಾಡಿ ಇದರ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಬಾಲಕರ ವಿಭಾಗದಲ್ಲಿ ಸಾಲ್ಮರ ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಯ ಅಧೀನದ ಕನ್ನಡ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಮುಫೀಝ್ ಚಕ್ರ ಎಸೆತದಲ್ಲಿ ಪ್ರಥಮ , ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಬಾಲಕರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಸಾಲ್ಮರ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಜಸೀನಾ ಚಕ್ರ ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ 7ನೆಯ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಯಾಸಿರ್ ಡಿಸ್ಕಸ್ ತ್ರೋನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.