ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ
ಉಡುಪಿ: ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.
ಬಾಲಕೃಷ್ಣ (44.ವ) ಮೃತ ವ್ಯಕ್ತಿ. ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 20 ರಂದು ಬಾಲಕೃಷ್ಣ ಸಾವನ್ನಪ್ಪಿದ್ದರು.