ನಾಳೆ(ಅ.26) ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
ಪುತ್ತೂರು: ಉಡುಪಿ- ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅ.26ರಂದು ಬೆಳಿಗ್ಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಬಳಿಕ ಬಿಜೆಪಿ ಕಚೇರಿಯಲ್ಲಿ ಮಂಡಲದ ಅಭಿನಂದನೆ ಸ್ವೀಕರಿಸಿ, ಜೈನ ಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಕಬಕದಿಂದ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.