ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ಮಹಿಳೆ ಮೃತ್ಯು
ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಧನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಜಯಭಾರತಿ (56) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಅವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆಯನ್ನು ಸುಳ್ಯ ಆಸ್ಪತ್ರೆಗೆ ತಂದು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.