ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು.