ಕರಾವಳಿ

ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭಾಗಿಯಾಗುವುದು ಖಚಿತ: ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನವೆಂಬರ್ 2ರಂದು ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಶ್ಚಿತ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

ಅ. 27 ರಂದು ಬೆಂಗಳೂರಿನಲ್ಲಿ ಸಿ ಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದಾಗ ಶಾಸಕರಿಗೆ ಭರವಸೆ ನೀಡಿದ್ದಾರೆ. ಇವರಿಬ್ಬರ ಆಗಮನದಿಂದ ಕಾರ್ಯಕ್ರಮಕ್ಕೆ ಹೊಸ ಮೆರುಗು ಬಂದಂತಾಗಿದೆ ಎಂದು ಅಶೋಕ್ ರೈ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!