ಕ್ರೈಂರಾಷ್ಟ್ರೀಯ

ಮೊಮೊಸ್ ತಿಂದು ಮಹಿಳೆ ಮೃತ್ಯು 20 ಮಂದಿ ಅಸ್ವಸ್ಥ

ರಸ್ತೆ ಬದಿಯ ಸ್ಟಾಲ್ ಒಂದರಲ್ಲಿ ಮೊಮೊಸ್ ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು 20 ಮಂದಿ ಅಸ್ವಸ್ಥರಾಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ಅ.28ರಂದು ನಡೆದಿದೆ.


ರಸ್ತೆ ಬದಿಯ ಫುಡ್ ಸ್ಟಾಲ್ ನಲ್ಲಿ ಹಲವು ಮಂದಿ ಮೊಮೊಸ್ ತಿಂದಿದ್ದಾರೆ. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಪರಿಣಾಮ ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಉಳಿದ ಇಪ್ಪತ್ತು ಮಂದಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು. ಆಹಾರ ಮಳಿಗೆ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!