ಪುತ್ತೂರು : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಒಳಮೊಗ್ರು ಗ್ರಾಮದ ಕುಟ್ಟಿನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಈ ವೇಳೆ ಕೋಳಿ ಅಂಕಕ್ಕೆ ಬಳಸಿದ 5 ಕೋಳಿ ಮತ್ತು 7710 ರೂ. ಹಾಗೂ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.