ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜಿನಲ್ಲಿ “ಫ್ಯಲಿಸ್ಡೇಡ್ಸ್ 2k24”
ಪುತ್ತೂರು: ಸಿ.ಎಸ್.ಡಬ್ಲ್ಯು.ಸಿ. ಅಧೀನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಫಾಳಿಲಾ -ಫಳೀಲಾ ಕಾಲೇಜ್ ಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧಾ ಕಾರ್ಯಕ್ರಮದಲ್ಲಿ ಫಾಳಿಲಾ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ವಿದ್ಯಾರ್ಥಿನಿಯರನ್ನು ಆಡಳಿತ ಸಮಿತಿ ವತಿಯಿಂದ ಅಭಿನಂದಿಸುವ "ಫ್ಯಲಿಸ್ಡೇಡ್ಸ್ 2k24" ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಅವರು ವಿದ್ಯಾರ್ಥಿನಿಯರ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮ ವನ್ನು ಉದ್ಗಾಟಿಸಿ ಮಾತನಾಡಿದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಅವರು ಹಿಯಾ ಫಿಯೆಸ್ಟ ದಲ್ಲಿ ಉತ್ತಮ ಸಾಧನೆ ಮಾಡಿದ ಕಾಲೇಜ್ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು. ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ ಅವರು ಮಾತನಾಡಿ ವಿದ್ಯಾರ್ಥಿನಿಯರ ಸಾಧನೆಯನ್ನು ಪ್ರಶಂಸಿಸಿದರು.
ಹಿಯಾ ಫಿಯೆಸ್ಟಾ ದಲ್ಲಿ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದ ಶಝ್ಮಾ ಪಡೀಲ್ ಮತ್ತು ಕಾಲೇಜ್ ನ ಮೀಡಿಯಾ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ ಶಿಕ್ಷಕಿ ಮಿಶ್ರಿಯಾ ಅಸ್ವಾಲಿಹಾ ಅವರಿಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್ ಅವರು ವೈಯಕ್ತಿಕ ಕ್ಯಾಶ್ ಅವಾರ್ಡ್ ನೀಡಿ ಗೌರವಿಸಿದರು. ಹಿಯಾ ಫಿಯೆಸ್ಟಾ ದಲ್ಲಿ ವಿಜೇತ ತಂಡಕ್ಕೆ ಮೌಂಟನ್ ವ್ಯೂ ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಮತ್ತು ಅಸ್ವಾಲಿಹಾ ವುಮೆನ್ಸ್ ಕಾಲೇಜ್ ಸಂಚಾಲಕ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ಅವರು ವೈಯಕ್ತಿಕವಾಗಿ ಬಹುಮಾನಗಳನ್ನು ನೀಡಿ ಅಭಿನಂದಿಸಿದರು.
ಉಸ್ತಾದ್ ಕೆ.ಎಂ.ಎ. ಕೊಡುಂಗಾಯಿ ಫಾಝಿಲ್ ಹನೀಫಿ ಸ್ವಾಗತಿಸಿದರು. ಮದ್ರಸ ಶಿಕ್ಷಕ ನಝೀರ್ ಅರ್ಶದಿ ಪ್ರಾರ್ಥನೆ ನಡೆಸಿದರು. ಶಾಲಾ ಶಿಕ್ಷಕ ಅಬ್ದುಲ್ ರವೂಫ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕಾರ್ಯಕ್ರಮದ ಬಳಿಕ ಕಾಲೇಜ್ ನ ಉಪನ್ಯಾಸಕಿಯರಾದ ಸಾಜಿದಾ ಮತ್ತು ಮಿಶ್ರಿಯಾ ಅಸ್ವಾಲಿಹಾ ಅವರ ನೇತೃತ್ವದಲ್ಲಿ ವಿವಿಧ ಪ್ರತಿಭಾ ಕಾರ್ಯಕ್ರಮ ಮತ್ತು ಸ್ಮರಣಿಕೆ ವಿತರಣೆ ನಡೆಯಿತು.