ಕರಾವಳಿಕ್ರೈಂ

ಮನೆಗಳ್ಳತನ, ಶಾಲೆ ಅಂಗನವಾಡಿ ಕಳವು ಪ್ರಕರಣಗಳ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು

ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಅ.29ರಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಜಂಕ್ಷನ್‌ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ. ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಅವರು ಭಾಗಿಯಾಗಿವುದು ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು  ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮದ ಧರ್ಮನಗರದ ಮಹಮ್ಮದ್‌ ರಿಯಾಜ್‌ ಹಸನಬ್ಬ (38 ವರ್ಷ) ಹಾಗೂ ಉಳ್ಳಾಲ ತಾಲೂಕು ಹಳೆಕೋಟೆಯ ಮೊಹಮ್ಮದ್‌ ಇಂತಿಯಾಜ್ (38 ವರ್ಷ) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ರೂ 1,35,000/- ರೂ ಮೌಲ್ಯದ ಗ್ಯಾಸ್‌ ಸಿಲಿಂಡರ್‌ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾ -01 ಇದರ ಅಂದಾಜು ಮೌಲ್ಯ 1,50,000/- ರೂ ಆಗಿದ್ದು ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಆಗಬಹುದು.

ಸದ್ರಿ ಆರೋಪಿ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಯತೀಶ್‌ ಎನ್‌, ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ  ರಾಜೇಂದ್ರ ಡಿ ಎಸ್‌ ರವರ ಮಾರ್ಗದರ್ಶನದಂತೆ, ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ  ಎಸ್.‌ ವಿಜಯ ಪ್ರಸಾದ್‌ ರವರ ನಿರ್ದೇಶನದಲ್ಲಿ, ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ನಾಗರಾಜ್‌ ಹೆಚ್‌ ಇ. ರವರ ನೇತ್ರತ್ವದ ಪೊಲೀಸ್‌ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್‌, ಕೌಶಿಕ್‌ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್‌ ರೈ,ಶ್ರೀಧರ ಸಿ ಎಸ್‌, ಕೃಷ್ಣ ನಾಯ್ಕ್‌, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್‌,ಸತೀಶ್‌ ,ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌ರವರುಗಳ ತಂಡ ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!