ಕರಾವಳಿ

ಮಹಮ್ಮದ್ ಹಾಜಿ ಕುಕ್ಕುವಳ್ಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನ.1ರಂದು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿಲ್ಲಾಧಿಕಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

“ಸೂರಿಲ್ಲದವರಿಗೊಂದು ಆಸರೆ” ಎನ್ನುವ ಸಂಸ್ಥೆ ಕಟ್ಟಿಕೊಂಡು ಸುಮಾರು 70ಕ್ಕೂ ಅಧಿಕ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮತ್ತು ಮನೆ ದುರಸ್ತಿ ಕಾರ್ಯ ಮಾಡಿಕೊಟ್ಟಿರುವ ಮಹಮ್ಮದ್ ಕುಕ್ಕುವಳ್ಳಿ ಅವರು ನೂರಾರು ಬಡ ಕುಟುಂಬಗಳ ಪಾಲಿಗೆ ಆಶಾಕಿರಣವಾಗಿ ಮೂಡಿ ಬಂದಿದ್ದಾರೆ. ನೂರಾರು ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ಮಾಡಿದ್ದಾರೆ.
ಆಶಕ್ತರ, ನೊಂದವರ ಪಾಲಿನ ಆಶಾಕಿರಣವಾಗಿರುವ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಸಾಮಾಜಿಕ ಚಟುವಟಿಕೆಯ ಜೊತೆಗೆ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಸಕ್ರಿಯವಾಗಿದ್ದರು.


ಹಲವಾರು ರೋಗಿಗಳಿಗೂ ಆರ್ಥಿಕವಾಗಿ ನೆರವಾಗಿರುವ ಇವರು ಸದಾ ಬಡವರ ಪರವಾಗಿ ಕೆಲಸ ಮಾಡುತ್ತಿದ್ದರು. ಹಲವಾರು ಮಂದಿಗೆ ಉದ್ಯೋಗದಾತರಾಗಿಯೂ ಗುರುತಿಸಿಕೊಂಡಿದ್ದಾರೆ.


ಉದ್ಯಮಿಯಾಗಿರುವ ಇವರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದಕ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಸಂಘ ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!