ಕರಾವಳಿ

ಈಡನ್ ಗ್ಲೋಬಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ




ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಶಾಲಾ ಪ್ರಾಂಶುಪಾಲರಾದ ರಂಝೀ ಮುಹಮ್ಮದ್ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದೇಶವನ್ನು ನೀಡಿದದರು.

ಶಾಲಾ ಶೈಕ್ಷಣಿಕ ಸಂಯೋಜಕಿಯಾದ ಶ್ರೀಮತಿ ಅರ್ಪಿತ ಹಾಗೂ ಕನ್ನಡ ಶಿಕ್ಷಕಿಯಾದ ಶ್ರೀಮತಿ ಜಯಶೀಲ ಕನ್ನಡ ಭಾಷಾ ಮಹತ್ವ ಹಾಗೂ ಇದರ ಇತಿಹಾಸವನ್ನು ಮಕ್ಕಳಿಗೆ ನೆನಪಿಸಿದರು. ನಂತರ ಶಿಕ್ಷಕರು ಮತ್ತು ಮಕ್ಕಳು ತಮ್ಮ ಹಾಡು, ಭಾಷಣ, ಗಾದೆ, ಚುಟುಕುಗಳ ಮೂಲಕ ತಮ್ಮ ಕನ್ನಡ ಭಾಷಾ ಪ್ರೇಮವನ್ನು ಹಂಚಿಕೊಂಡರು. ಕನ್ನಡ ಶಿಕ್ಷಕಿ ಶ್ರೀಮತಿ ಪವಿತ್ರ ಮಕ್ಕಳಿಗೆ ಕನ್ನಡ ಭಾಷೆಯ ಜ್ಞಾನ ಹೆಚ್ಚಿಸಲು ರಸಪ್ರಶ್ನೆಗಳನ್ನು ಕೇಳಿ ಮನರಂಜಿಸಿದರು.

ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಫಾತಿಮತ್ ಶಝ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅರ್ಶಾನ ಮತ್ತು ಅಮ್ನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ನಾಝಿಮ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!