ರಾಜಕೀಯರಾಜ್ಯ

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ





ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಸೋಕೆ ಹೋದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದಲ್ಲಿ ಮೈಸೂರು ಬ್ಯಾಂಕ್‌ ಸರ್ಕಲ್‌ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಮಾತನಾಡಿದ ಅವರು, ಇದು ಸಿದ್ದರಾಮಯ್ಯ ಅಂತಾ ಪ್ರಶ್ನೆ ಅಲ್ಲ, ಪ್ರಜಾಪ್ರಭುತ್ವಕ್ಕೆ ಅನ್ಯಾಯ ಮಾಡಿದಂತೆ. ಈ ಬಗ್ಗೆ ಎಲ್ಲಾ ಪಕ್ಷದವರು ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.

ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೋ  ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಸೋಕೆ ಹೋದರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ ಎಂದು ಅವರು ಗುಡುಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!