ಕರಾವಳಿ

ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ವ್ಯಕ್ತಿ ಮೃತ್ಯು, ಸ್ಥಳದಲ್ಲಿ ಆಕ್ರೋಷಿತರಿಂದ ಪ್ರತಿಭಟನೆ

ಸುಳ್ಯ: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದ್ದು ಬಳಿಕದ ಬೆಳವಣಿಗೆಯಲ್ಲಿ ಆಕ್ರೋಷಿತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.


ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸವಾರ ಬಲಿಯಾಗುವಂತಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ದೂಪದ ಮರ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು  ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕೆಂದೂ ಪ್ರತಿಭಟನಾಕಾರರು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!