ಬಾಬಾ ಸಿದ್ದಿಕಿ ಅವರಂತೆಯೇ ಹತ್ಯೆ ಮಾಡುವುದಾಗಿ ಯುಪಿ ಸಿಎಂ ಆದಿತ್ಯನಾಥ್ ಗೆ ಬೆದರಿಕೆ ಕರೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರಂತೆಯೇ ಹತ್ಯೆ ಮಾಡಲಾಗುವುದು ಎಂದು ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಬೆದರಿಕೆ ಸಂದೇಶವನ್ನು ಯಾರು ಕಳುಹಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ.