ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ: ಪ್ರಧಾನಿ ಮೋದಿ
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್‌ನ ಚೈಬಾಸಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚುನಾವಣೆಯ ಅಂಚಿನಲ್ಲಿರುವ ಜಾರ್ಖಂಡ್ ರಾಜ್ಯದಲ್ಲಿ ನಾನು ಒಂದೇ ಬಾರಿ ಪ್ರಚಾರ ನಡೆಸಿದ್ದರೂ ಜಾರ್ಖಂಡ್ ರಾಜ್ಯದಲ್ಲಿ ಎನ್ಡಿಎ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.