ಅಶ್ಲೀಲ ವಿಡಿಯೋ ಕರೆ ಮೂಲಕ ಮಹಿಳೆಯಿಂದ ವಿದ್ಯಾರ್ಥಿಯ ಬ್ಲ್ಯಾಕ್‌ಮೇಲ್ ಯತ್ನ
ಉಪ್ಪಿನಂಗಡಿ: ತನ್ನ ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ವಿದ್ಯಾರ್ಥಿಯೋರ್ವನನ್ನು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯಿಂದ ಮಾತನಾಡಿ ಬಳಿಕ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ನಗ್ನ ದೇಹವನ್ನು ತೋರಿಸಿದ್ದಾರೆ ಎನ್ನಲಾಗಿದೆ. ಬಳಿಕ ವೀಡಿಯೊ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು ಬಳಸಿ ಅಶ್ಲೀಲ ವೀಡಿಯೊಗೆ ಎಡಿಟ್ ಮಾಡಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ನಾವು ಮಾಡಿರುವ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಮಾಹಿತಿ ಲಭಿಸಿದೆ ಎಂಬ ಸುಳಿವು ಸಿಕ್ಕಿದ ಕೂಡಲೇ ವಿದ್ಯಾರ್ಥಿಯನ್ನು ಬೆದರಿಸುವ ಕಾರ್ಯದಿಂದ ವಿಮುಖವಾದ ತಂಡ ಬಳಸಿದ ಮೂರು ಸಂಖ್ಯೆಯನ್ನು ನಿಷ್ಕ್ರಿಯಗೊಳಿಸಿದೆಯಲ್ಲದೆ, ಬೆದರಿಕೆಗೆ ತುತ್ತಾದ ವಿದ್ಯಾರ್ಥಿಯನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬ್ಲಾಕ್ ಮಾಡಿದ್ದಾರೆ ಎನ್ನಲಾಗಿದೆ.