ಸುಬ್ರಹ್ಮಣ್ಯ: ದೇವಸ್ಥಾನದಿಂದ ಕಳವು ಪ್ರಕರಣ, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಅಭಯ ಆಂಜನೇಯ ಗುಡಿ ದೇವಸ್ಥಾನದಿಂದ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತ ಆರೋಪಿ.
ದೇಗುಲದ ಪಾರ್ಕಿಂಗ್ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಎಸ್.ಐ ಕಾರ್ತಿಕ್.ಕೆ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿದ್ದಾರೆ. ಜಾಗವೊಂದರ ಬಳಿ ಮೂಟೆ ಕಟ್ಟಿರುವುದು ಕಂಡು ಬಂದಿದ್ದು . ಸುಮಾರು 15 ಸಾವಿರಕ್ಕೂ ಹೆಚ್ಚು ಮೊತ್ತದ ಬೆಲೆಬಾಳುವ ಗಂಟೆ, ಕಾಲುದೀಪ, ತಟ್ಟೆ,ತೂಗುದೀಪ , ಸಿಸಿ ಕೆಮರಾ ಸ್ವಿಚ್ ಸೇರಿದಂತೆ ಕಳ್ಳತನ ಮಾಡಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಗುಡಿಯ ಅರ್ಚಕರು ನ. 3ರಂದು ರಾತ್ರಿ ಬಾಗಿಲು ಹಾಕಿ ತೆರಳಿದ್ದು, ನ. 4ರಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳರು ನುಗ್ಗಿ ದೇವಸ್ಥಾನದಲ್ಲಿದ್ದ ಪೂಜೆ ಸಾಮಗ್ರಿಗಳು,ಸಿಸಿ ಕೆಮರಾದ ಸೊತ್ತುಗಳು ಕಳ್ಳತನ ಆಗಿರುವುದು ಬೆಳಕಿಗೆ ಬಂದಿತ್ತು.