ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಸುಳ್ಯ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನ.7ರಂದು ಸಂಜೆ ವರದಿಯಾಗಿದೆ.
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಚಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್ ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.