ಕರಾವಳಿ

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಯಡಿಯೂರಪ್ಪ



ಮೂರು ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಕಾವು ಜೋರಾಗಿದ್ದು ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳ ನಾಯಕರ ಆರೋಪ ಪ್ರತ್ಯಾರೋಪ, ವಾಗ್ದಾಳಿ ತಾರಕಕ್ಕೇರಿದೆ. ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರಕಾರ ಕಿತ್ತೊಗೆಯಬೇಕು. ಇನ್ನುಕೆಲವೇ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಜೈಲಿಗೂ ಹೋಗುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರದಲ್ಲಿ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಯಾಗುತ್ತಿದೆ. ಇನ್ನು ಸಿಬಿಐ, ಇಡಿ ತನಿಖೆಯಾಗಲಿದೆ. ಖಜಾನೆ ಲೂಟಿ ಹೊಡೆಯುತ್ತಿರುವ ಸಿದ್ದರಾಮಯ್ಯ ಸರಕಾರ ಹಗಲು ದರೋಡೆ ಮಾಡುತ್ತಿದ್ದು, ಜನರು ಕೊಟ್ಟ ತೆರಿಗೆ ಹಣವನ್ನು ಲೂಟಿ ಮಾಡಿದ್ದಾರೆ. ಬಡವರ ಅಭಿವೃದ್ಧಿ ಕೆಲಸ ಇಲ್ಲ, ನನ್ನ ಆಡಳಿತದಲ್ಲಿ ಮಹಿಳೆಯರಿಗೆ ಕೊಟ್ಟ ಭಾಗ್ಯಲಕ್ಷ್ಮೀ ಯೋಜನೆ ಕೂಡ ನಿಲ್ಲಿಸಿ ಹೆಣ್ಣು ಮಕ್ಕಳಿಗೆ ದ್ರೋಹ ಮಾಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!