ತೊಕ್ಕೊಟ್ಟು: ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆ ಮೃತ್ಯು: ಆಕ್ರೋಶಿತ ಜನರಿಂದ ಪ್ರತಿಭಟನೆ
ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ಶನಿವಾರ ಸಂಜೆಯ ವೇಳೆ ನಡೆದಿದೆ.
ಮೃತ ಮಹಿಳೆಯನ್ನು ಕುಳಾಯಿ ಮೂಲದ ರಹ್ಮತ್ ಎಂದು ಗುರುತಿಸಲಾಗಿದೆ.
ಪ್ರಸ್ತುತ ಅವರು ದೇರಳಕಟ್ಟೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಪತಿ ರಶೀದ್ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.