ಪತ್ನಿ, ಮಗುವನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ
ಮೂಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಕೊಲೆಗೀಡಾದವರು. ಕಾರ್ತಿಕ್ ಭಟ್ (32) ಹತ್ಯೆ ಮಾಡಿದಾತ. ನ.8ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮೂಲ್ಕಿಯ ಬೆಳಾಯರು ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪಕ್ಷಿಕೆರೆಯ ಕಾರ್ತಿಕ್ ಭಟ್ ಆತ್ಮಹತ್ಯೆಗೈದಾತ ಎಂದು ತಿಳಿದುಬಂದಿದ್ದು, ಮನೆಗೆ ಬಂದಾಗ ಪತ್ನಿ, ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.