ಮಂಗಳೂರು: ಮಗುವಿನೊಂದಿಗೆ ಸೇತುವೆ ಮೇಲೇರಿ ನದಿಗೆ ಹಾರಲು ಯತ್ನಿಸಿದ ವ್ಯಕ್ತಿಯ ರಕ್ಷಣೆ
ಮಂಗಳೂರು: ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.10ರಂದು ನಡೆದಿದೆ.

ಕೈಕಂಬ ನಿವಾಸಿ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ ವೇಳೆ ಅವನು ನದಿಗೆ ಹಾರಿದ್ದೇ ಆದಲ್ಲಿ ರಕ್ಷಣೆ ಮಾಡಲು ಸಹ ಕೆಲ ಯುವಕರು ಸಿದ್ದರಾಗಿ ನಿಂತಿದ್ದರು.
ಕೊನೆಗೆ ನದಿಗೆ ಹಾರಲು ಸಂದೀಪ್ ಯತ್ನಿಸಿದ ಸಂದೀಪ್ ಹಾಗೂ ಮಗುವನ್ನ ರಕ್ಷಣೆ ಮಾಡಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.