ಸಜೀಪನಡು: ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ- 6 ಮಂದಿ ಅರೆಸ್ಟ್
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನ.7ರಂದು ರಾತ್ರಿ ಮಹಮ್ಮದ್ ಮುಸ್ತಾಪ(21ವ) ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಮುಸ್ತಫಾ ಎಂಬಾತನು ದೂರದ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿಗೆ ಬಂದಾಗ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದ್ದು ಈ ಬಗ್ಗೆ ನ.8ರಂದು ಮಹಮ್ಮದ್ ಮುಸ್ತಫ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ 99/2024 ಕಲಂ 115(2), 126(2), 189(2), 190, 191(2), 191(3),351(2),352 ಬಿಎನ್‍ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.