ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು, ಅಂಗಾಂಗ ದಾನ
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23ವ) ಮೃತಪಟ್ಟವರು.
ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿದ್ದರು.