ರಾಜ್ಯ

ಕೋವಿಡ್ ಹಗರಣ ತನಿಖೆಗೆ ಎಸ್.ಐ.ಟಿ ರಚಿಸಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಸಾವಿರಾರು ಕೋಟಿ ರೂ. ಕೋವಿಡ್ ಹಗರಣದ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು ಅದರಲ್ಲಿ  ಕೋಟ್ಯಂತರ ರೂ. ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಕುರಿತು ನ.14ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  ಚರ್ಚೆ ನಡೆದು ಅಂತಿಮವಾಗಿ ಕೊವಿಡ್ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಕೊವಿಡ್ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಕೋವಿಡ್ ಹಗರಣ ನಡೆದಿರುವ ಬಗ್ಗೆ ಭಾರಿ ಆರೋಪ ಕೇಳುತ್ತಿರುವ ಬೆನ್ನಲ್ಲೇ, ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

Leave a Reply

Your email address will not be published. Required fields are marked *

error: Content is protected !!