ಹಿರೆಬಂಡಾಡಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ
ಪುತ್ತೂರು: ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು, ದ.ಕ ಜಿಲ್ಲಾ ಮಹಿಳಾ ತರಬೇತುದಾರರ ಸಂಚಲನ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನಿನ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಉಪಾದ್ಯಕ್ಷರಾದ ನ್ಯಾಯವಾದಿ ಮೋನಪ್ಪ.ಕೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸುಜನ್ ಮತ್ತು ಸಿಂಚನ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು,
ವಕೀಲರ ಸಂಘದ ಕೋಶಾಧಿಕಾರಿ ನ್ಯಾಯವಾದಿ ಮಹೇಶ್ ಸವಣೂರುರವರು ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕರ್ತವ್ಯದ ಬಗ್ಗೆ ಕಾನೂನು ಅರಿವು ಮೂಡಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮೇಶ್ ಕೆ ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ರಫೀಕ್ ದರ್ಬೆಯವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಸುಮಂಗಳಾ ಶೆಣೈ ಯವರು ವಿದ್ಯಾರ್ಥಿಗಳಿಗೆ ಚಟುವಟಿಕೆ ನಡೆಸಿ ಶುಭ ಹಾರೈಸಿದರು. ವತ್ಸಲಾ ನಾಯಕ್ ಕಾರ್ಯಕ್ರಮ ಸಂಯೋಜನೆ ಮಾಡಿದರು.
ಹಿರೆಬಂಡಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಆಲಿ, ಸಾಮಾಜಿಕ ಕಾರ್ಯಕರ್ತರಾದ ಸೇಸಪ್ಪ ನೆಕ್ಕಿಲು, ತಾ.ಕಾ.ಸೇವಾ ಪ್ಯಾರಾ ಲೀಗಲ್ ವಾಲೆಂಟಿಯರ್ ಆದ ಅಬೂಬಕ್ಕರ್ ಕಡಬ, ಜನಾರ್ದನ ಬಂಗೇರ ಕಡಬ, ಪಡಿ ಮಂಗಳೂರು ಸಂಯೋಜಕರಾದ ವಿಜಯ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ತಾ.ಕಾ.ಸೇವಾ ಸಮೀತಿ ಸಿಬ್ಬಂದಿ ಜ್ಯೋತಿ ಹಾಗೂ ದೀಕ್ಷಿತ್ ರವರು ಸಹಕರಿಸಿದರು. ಸಹ ಶಿಕ್ಷಕರಾದ ಶ್ರೀ ಕ್ರಷ್ಣ ಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.