ಕ್ರೈಂರಾಷ್ಟ್ರೀಯ

ಚುನಾವಣಾ ಅಧಿಕಾರಿಗೆ ಕಪಾಳಮೋಕ್ಷ: ಸ್ವತಂತ್ರ ಅಭ್ಯರ್ಥಿ ಬಂಧನ

ಮತದಾನದ ವೇಳೆ ಚುನಾವಣಾ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ನ.14ರಂದು ಬಂಧಿಸಲಾಗಿದೆ. ರಾಜಸ್ಥಾನದ ಡಿಯೋಲಿ-ಉನಿಯಾರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಮತದಾನದ ವೇಳೆ ಈ ಘಟನೆ ನಡೆದಿದೆ.

ಬಂಧನಕ್ಕೂ ಕೆಲವೇ ನಿಮಿಷಗಳ ಮೊದಲು ಮೀನಾ, ವರದಿಗಾರರಿಗೆ “ನಾನು ಶರಣಾಗುವುದಿಲ್ಲ” ಎಂದು ಘೋಷಿಸಿದ್ದರು. ಸಂರವತ ಮತಗಟ್ಟೆಗೆ ತೆರಳಿದ್ದ ಮೀನಾ, ಚುನಾವಣಾ ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅವರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!