ಕೋವಿಡ್ ಹಗರಣ; ಎಸ್ಐಟಿ ತನಿಖೆಗೆ, ಸಂಸದ ಡಾ. ಸಿಎನ್ ಮಂಜುನಾಥ್ ಗೆ ಸಂಕಷ್ಟ?
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ಈಗಾಗಲೇ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಎಸ್ಐಟಿ ವಹಿಸಲು ತೀರ್ಮಾನಿಸಿದೆ.
ಇದರಿಂದ ಬಿಜೆಪಿ ಸಂಸದ ಡಾ ಸಿಎನ್ ಮಂಜುನಾಥ್ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಮಂಜುನಾಥ್ ಅವರು ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದರಿಂದ ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದ್ದು ಎಸ್ಐಟಿ ತನಿಖೆ ನಡೆಸುವ ಸಾಧ್ಯತೆ ಇದೆ.