ಪುರುಷರಿಗೂ ಉಚಿತ ಸರಕಾರಿ ಬಸ್ ಪ್ರಯಾಣ? ಸಾರಿಗೆ ಸಚಿವರಿಂದ ಸ್ಪಷ್ಟನೆ
ಶಕ್ತಿ ಯೋಜನೆಯಡಿ ಪುರುಷರಿಗೂ ಉಚಿತ ಸರ್ಕಾರಿ ಬಸ್ ಪ್ರಯಾಣ ಚರ್ಚೆಯ ಮಧ್ಯೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದು ಪುರುಷರಿಗೂ ಉಚಿತ ಸರ್ಕಾರಿ ಬಸ್ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ತಿಳಿಸಿದ್ದಾರೆ. ಸ್
ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ನಿನ್ನೆ ವಿಧಾನಸೌಧದಲ್ಲಿ ನಡೆದ ಮಕ್ಕಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಕುರಿತು ಪ್ರಶ್ನಿಸಿದ್ದನು. ಈ ಬಗ್ಗೆ ಉತ್ತರಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದರು