ಕರಾವಳಿ

ಉಳ್ಳಾಲ: ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಮೃತ್ಯು

ಮಂಗಳೂರು: ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಾಂದರ್ಭಿಕ ಚಿತ್ರ

ಮೃತರನ್ನು ಕೀರ್ತನಾ ಎನ್ (21ವ), ನಿಶಿತಾ ಎಂ.ಡಿ(21ವ) ಹಾಗೂ ಪಾರ್ವತಿ ಎಸ್. (20ವ) ಎಂದು ಗುರುತಿಸಲಾಗಿದೆ. ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ರೆಸಾರ್ಟ್ ಮುಂಭಾಗದಲ್ಲಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!