ಕರಾವಳಿಕ್ರೈಂ

ಪುತ್ತೂರು: ಕೆಲಸದ ವೇಳೆ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಮನೆ ಎದುರಿನ ರಸ್ತೆಯಲ್ಲಿಟ್ಟು ಹೋದ ಪ್ರಕರಣ: ದಲಿತ ಸಂಘಟನೆಗಳ ಪ್ರತಿಭಟನೆ

ಪುತ್ತೂರು: ಕೆಲಸದ ವೇಳೆ ಮೃತಪಟ್ಟ ಕಾರ್ಮಿಕರೊಬ್ಬರನ್ನು ಪಿಕಪ್ ವಾಹನದಲ್ಲಿ ತಂದು ಮೃತರ ಮನೆ ಎದುರಿನ ರಸ್ತೆಯಲ್ಲಿ ಇಟ್ಟು ಹೋದ ಘಟನೆ ಪುತ್ತೂರಿನಲ್ಲಿ ವರದಿಯಾಗಿದ್ದು ಘಟನೆ ಖಂಡಿಸಿ ದಲಿತ ಸಂಘಟನೆಗಳು ಇಂದು ಪುತ್ತೂರು ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಶಿವಪ್ಪರನ್ನು ಶನಿವಾರ ಬೆಳಗ್ಗೆ ಸಾಲ್ಮರ ತ್ರಾವೋ ಇಂಡಸ್ಟ್ರೀಸ್ ನ ಹೆನ್ರಿ ತ್ರಾವೋ ಎಂಬವರು ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದೊಯ್ದಿದ್ದರೆನ್ನಲಾಗಿದೆ. ಕೆಲಸದ ಸ್ಥಳದಲ್ಲಿ ಶಿವಪ್ಪರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯಾಹ್ನದ ವೇಳೆ ಪಿಕಪ್ ನಲ್ಲೇ ಶಿವಪ್ಪರನ್ನು ಕರೆತಂದು ಅವರ ಮನೆಯ ಮುಂಭಾಗದಲ್ಲಿನ ರಸ್ತೆಯಲ್ಲಿ ಮಲಗಿಸಿ ತೆರಳಿದ್ದಾರೆ. ತಕ್ಷಣ ನಾನು ಹಾಗೂ ತಾಯಿ ರಸ್ತೆ ಬದಿ ಹೋಗಿ ನೋಡಿದಾಗ ತಂದೆ ಮೃತಪಟ್ಟಿದ್ದರು. ಬಳಿಕ ಸ್ಥಳೀಯರ ನೆರವಿನಿಂದ ಮೃತದೇಹವನ್ನು ಮನೆಯೊಳಗಡೆ ತಂದೆವು ಎಂದು ಶಿವಪ್ಪರ ಪುತ್ರಿ ಉಷಾ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಉಷಾ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ತಂದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಪ್ಪರ ಮೃತದೇಹವನ್ನು ರಸ್ತೆಯಲ್ಲಿಟ್ಟು ಹೋದ ಅಮಾನವೀಯ ಘಟನೆಯನ್ನು ಖಂಡಿಸಿ ವಿವಿಧ ದಲಿತ ಸಂಘಟನೆಗಳು ರವಿವಾರ ಪುತ್ತೂರು ನಗರ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಶಾಸಕ ಅಶೋಕ್ ಕುಮಾರ್ ರೈ ಪೊಲೀಸರಿಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!