ಕರಾವಳಿಕ್ರೈಂ

ಸಿಡಿಲು ಬಡಿದು ಬಾಲಕ ಮೃತ್ಯು



ಪುತ್ತೂರು: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಬಂಟ್ವಾಳ ತಾಲ್ಲೂಕು ಕೆದಿಲ ಗ್ರಾಮದ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ ಸುಭೋದ್(14) ಎಂದು ಗುರುತಿಸಲಾಗಿದೆ.

ಇಂದು ಸಂಜೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆ ವೇಳೆಗಾಗಲೆ ಬಾಲಕ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!