ರಾಜಕೀಯರಾಜ್ಯ

ಎಚ್‌. ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ



ಬೆಂಗಳೂರು: ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ಭೇಟಿ ಮಾಡಿದರು.

ರಾಜ್ಯಸಭಾ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!