ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ
ಬೆಂಗಳೂರು: ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್ಗೆ ತೀವ್ರ ಆಘಾತ ನೀಡಿದೆ.
ಉಪಚುನಾವಣೆ ನಡೆದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಸಂಡೂರಿನಲ್ಲಿ ಬಿಜೆಪಿಯ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ನ ಅನ್ನಪೂರ್ಣ, ಚನ್ನಪಟ್ಟಣದಲ್ಲಿ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಮತ್ತು ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ ಗೆಲುವು ಕಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮತದಾರರು ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗೆ ಬೆಂಬಲ ನೀಡಿ ಮತ ಚಲಾಯಿಸಿದ್ದಾರೆ ಎನ್ನಲಾಗುತ್ತಿದೆ.