ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು: ಗುಡುಗಿದ ಯತ್ನಾಳ್
ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಬಿಜೆಪಿ ಸೋಲಿನ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಪ್ರತಿಕ್ರಿಯಿಸಿ, ಮೂರಕ್ಕೆ ಮೂರು ಕ್ಷೇತ್ರಗಳಲ್ಲಿ ಸೋಲಿಗೆ ಅಪ್ಪ-ಮಗನನ್ನು ಹೊಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ತಂದೆ, ಮಗ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ವಿಜಯೇಂದ್ರರನ್ನ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದನ್ನು ಜನ ಸ್ಪಷ್ಟವಾಗಿ ತಿರಸ್ಕಾರ ಮಾಡಿದ್ದಾರೆ ಇದು ಸ್ಪಷ್ಟ ಸಂದೇಶ. ಇನ್ನಾದರು ಹೈಕಮಾಂಡ ಪೂಜ್ಯ ತಂದೆ ಮಗನ ಮೇಲಿನ ವ್ಯಾಮೋಹ ಬಿಡಬೇಕು ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕಿದರು.