ಕರಾವಳಿರಾಷ್ಟ್ರೀಯ

‘ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಅಶ್ರಫ್ ಶಾ ಮಾಂತೂರು ಆಯ್ಕೆ

ಪುತ್ತೂರು: ಕೇರಳದ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕೊಡಲ್ಪಡುವ “ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”ಗೆ ಉದ್ಯಮಿ ಅಶ್ರಫ್ ಶಾ ಮಾಂತೂರು ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.


ನ.27ರಂದು ಕೇರಳದ ತಿರುವನಂತಪುರಂ ಭಾರತ್ ಸಭಾಭವನದಲ್ಲಿ ನಡೆಯುವ ಅನಂತಪುರಿ ಗಡಿನಾಡ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಶ್ರಫ್ ಶಾ ಮಾಂತೂರು ಅವರು ಬೆಳಂದೂರು ಈಡನ್ ಗ್ಲೋಬಲ್ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದು ಅನಿವಾಸಿ ಉದ್ಯಮಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!