ಐಪಿಎಲ್ ಮೆಗಾ ಹರಾಜು: ಶ್ರೇಯಸ್ ಅಯ್ಯರ್ ಹಿಂದಿಕ್ಕಿ ದಾಖಲೆ ಮೊತ್ತಕ್ಕೆ ಹರಾಜಾದ ಪಂತ್
ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಭಾರತದ ಬ್ಯಾಟ್ಸ್ ಮೆನ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ಬರೋಬ್ಬರಿ 27 ಕೋಟಿ ರೂ. ಗೆ ಹರಾಜಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ.
ರಿಷಬ್ ಪಂತ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಉಳಿಸಿಕೊಳ್ಳುವ ಪ್ರಯತ್ನ ನಡೆಸಿತು. ಕೊನೆಗೆ ಲಕ್ನೋ ತಂಡವು ಅವರನ್ನು 27 ಕೋಟಿ ರೂ.ಗೆ ತನ್ನದಾಗಿಸಿಕೊಂಡಿತು. ಶ್ರೇಯಸ್ ಅಯ್ಯರ್ 26.5 ಕೋಟಿ ರೂ ಗೆ ಹರಾಜಾಗಿದ್ದರು. ಆ ದಾಖಲೆಯನ್ನು ಪಂತ್ ಮುರಿದಿದ್ದಾರೆ.