Google Map ನೋಡಿಕೊಂಡು ಪ್ರಯಾಣ: ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು, ಮೂವರು ಸಾವು
ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಫರೀದ್‌ಪುರದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಗೂಗಲ್ ಮ್ಯಾಪ್ ಬಳಸಿಕೊಂಡು ತೆರಳುತ್ತಿದ್ದರು. ಸೇತುವೆ ಸಂಪೂರ್ಣ ನಿರ್ಮಾಣವಾಗಿರದ ಕಾರಣ ಕಾರು ಮಧ್ಯದಲ್ಲಿ ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಫರೂಕಾಬಾದ್‌ನ ವಿವೇಕ್ ಕುಮಾರ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ. ಆತನ ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.