ಕೆದಂಬಾಡಿ ಗ್ರಾ.ಪಂ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ ಜಯಭೇರಿ
ಪುತ್ತೂರು: ಕೆದಂಬಾಡಿ ಗ್ರಾ.ಪಂ ಒಂದು ಸ್ಥಾನಕ್ಕಾಗಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ತ್ರಿಕೋನ ಸ್ಪರ್ಧೆಯ ಕದನದಲ್ಲಿ ಕಾಂಗ್ರೆಸ್ ನಿಂದ ಮೆಲ್ವಿನ್ ಮೊಂತೆರೋ, ಬಿಜೆಪಿಯಿಂದ ಮೋಹನ್ ತಿಂಗಳಾಡಿ ಹಾಗೂ ಎಸ್.ಡಿ.ಪಿ.ಐನಿಂದ ರಫೀಕ್ ನಂಜೆ ಕಣದಲ್ಲಿದ್ದರು.
ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತೆರೋ 272 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ.