ಸಂವಿಧಾನ ದಿನದ ಪ್ರಯುಕ್ತ ನೆಲ್ಲಿಕಟ್ಟೆ ಶಿವರಾಮ ಕಾರಂತ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ಮಾಹಿತಿ ಕಾರ್ಯಗಾರ
ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಸಹಯೋಗದೊಂದಿಗೆ ಮಕ್ಕಳ ಮಾಸೋತ್ಸವ ಪ್ರಯುಕ್ತ ಸಂವಿಧಾನ ದಿನದ ಮಾಹಿತಿ ಕಾರ್ಯಕ್ರಮವನ್ನು ನೆಲ್ಲಿಕಟ್ಟೆ ಡಾ. ಶಿವರಾಮ ಕಾರಂತ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ರಫೀಕ್ ದರ್ಬೆ ಮಾತನಾಡಿ ಡಾ ಬಿ.ಆರ್. ಅಂಬೇಡ್ಕರ್ ರವರ ಸ೦ವಿಧಾನ ರಚನೆ ಸಂಬಂದ ಮಾಹಿತಿಗಳನ್ನ ನೀಡುವುದರೊಂದಿಗೆ ಒಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ನಯನಾ ರೈ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಮತ್ತು ವಿದ್ಯಾರ್ಥಿಗಳ ನಿತ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಜಲಜಾಕ್ಷಿ ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.