ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರಕಾರಕ್ಕೆ ನೀಡಿರುವ ಜನಾದೇಶವಲ್ಲ: ಬೊಮ್ಮಾಯಿ
ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.