ಮಂಗಳೂರು: ಚಲಿಸುತ್ತಿದ್ದ ಜೀಪ್ ಬೆಂಕಿಗಾಹುತಿ
ಮಂಗಳೂರು: ಚಲಿಸುತ್ತಿದ್ದ ಜೀಪ್ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ. ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ವ್ಯವಸ್ಥೆಗೆ ತೊಡಕುಂಟು ಮಾಡಿತ್ತು.