ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ..!

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.
ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಚೆನ್ನೈ ಪೊಲೀಸರಿಗೆ ನಾಪತ್ತೆ ಕುರಿತು ಮಾಹಿತಿ ನೀಡಿದ್ದರು. ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.