ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿರುವ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್.ಐ.ಆರ್
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.