ಪುತ್ತೂರು: ಅದ್ದು ಪಡೀಲ್ ಪೊಲೀಸ್ ವಶಕ್ಕೆ
ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು, ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ಹೊರ ಹಾಕಿದ್ದರು.
ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.