ಬಣ ಸಂಘರ್ಷ: ಶಾಸಕ ಯತ್ನಾಳ್‌ಗೆ ಹೈಕಮಾಂಡ್ ನೋಟಿಸ್
ಬೆಂಗಳೂರು,ಈ: ಬಿಜೆಪಿಯೊಳಗಿನ ಬಣ ಕಿತ್ತಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಹೈಕಮಾಂಡ್ ನೋಟಿಸ್ ನೀಡಿದೆ.
ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು ಯತ್ನಾಳ್‌ಗೆ ನೋಟಿಸ್ ನೀಡಿದ್ದು, ಯತ್ನಾಳ್ ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಹೈಕಮಾಂಡ್ ಕೇಳಿದೆ. ಈ ಮೂಲಕ ಕೊನೆಗೂ ಭಿನ್ನಮತಕ್ಕೆ ತೆರೆ ಎಳೆಯಲು ಹೈಕಮಾಂಡ್ ಮಧ್ಯಪ್ರವೇಶಿಸಿದೆ.